ತುಮಕೂರು: ತಾಲ್ಲೂಕಿನ ಹೊಳಕಲ್ಲು ಗ್ರಾಮದ ಬಳಿ ಮಂಗಳವಾರ ಸಂಜೆ 6.30ರ ಸುಮಾರಿನಲ್ಲಿ ಚಿರತೆ ದಾಳಿ ನಡೆಸಿದ್ದು ರಂಗಸ್ವಾಮಯ್ಯ (65) ಎಂಬುವವರು ಗಾಯಗೊಂಡಿದ್ದಾರೆ. ಬೇಲಿಯ ಬಳಿ ಕೆಲಸ ಮಾಡುತ್ತಿದ್ದಾಗ ಅವರ ಮೇಲೆ ಚಿರತೆ ದಾಳಿ ನಡೆಸಿದೆ. ಅವರ ಭುಜದ ಭಾಗಕ್ಕೆ ಗಾಯಗಳಾಗಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿದರು.
ಶಾಸಕ ಡಿ.ಸಿ.ಗೌರಿಶಂಕರ್ ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಚಿಕಿತ್ಸೆಗೆ ₹ 10,000 ನೆರವು ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.