ADVERTISEMENT

ಚಿರತೆ ದಾಳಿ, ಶೀಘ್ರ ಅಧಿಕಾರಿಗಳ ಸಭೆ: ಸಚಿವ ಆನಂದ್ ಸಿಂಗ್

ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಕ್ರಮ; ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2020, 15:52 IST
Last Updated 7 ಜೂನ್ 2020, 15:52 IST
ಆನಂದ್ ಸಿಂಗ್
ಆನಂದ್ ಸಿಂಗ್   

ತುಮಕೂರು: ಜಿಲ್ಲೆಯಲ್ಲಿ ಇನ್ನು ಮುಂದೆ ಜನ, ಜಾನುವಾರುಗಳ ಮೇಲೆ ಚಿರತೆ ದಾಳಿ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗುವುದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಭರವಸೆ ನೀಡಿದರು.

ಜಿಲ್ಲೆಯಲ್ಲಿ ಚಿರತೆ ದಾಳಿ ಹೆಚ್ಚಾದ ಹಿನ್ನೆಲೆಯಲ್ಲಿ ಈಗಾಗಲೇ ಸುಮಾರು 30 ಚಿರತೆಗಳನ್ನು ಸೆರೆ ಹಿಡಿಯಲಾಗಿದೆ. ಮುಂದೆ ದಾಳಿ ಆಗದಂತೆ ತಡೆಯಲು ಮುಂದಿನ ವಾರ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದರು.

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಪೊದೆಗಳು ಹೆಚ್ಚಾಗಿವೆ. ಈ ಪೊದೆಗಳೇ ಚಿರತೆ ಹಾವಳಿಗೆ ಕಾರಣವಾಗುತ್ತಿವೆ ಎಂಬ ಮಾತುಗಳು ಕೇಳಿ ಬಂದಿವೆ. ಆದ್ದರಿಂದ ಗ್ರಾಮ ಪಂಚಾಯಿತಿಯಿಂದ ನರೇಗಾ ಯೋಜನೆಯಡಿ ಪೊದೆಗಳ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಬೆಳೆ ನಾಶದ ಬಗ್ಗೆ ಈಗಾಗಲೇ ಹಣ ಬಿಡುಗಡೆಯಾಗಿದೆ. ಶೀಘ್ರವೇ ನೀಡಲಾಗುವುದು ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.