
ಚಿರತೆ
ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಅರೇಮಲ್ಲೇನಹಳ್ಳಿ ಹೊರವಲಯದಲ್ಲಿ ಭಾನುವಾರ ಚಿರತೆ ದಾಳಿಗೆ ಮಹಿಳೆ ಮೃತಪಟ್ಟಿದ್ದಾರೆ.
ಅರೇಮಲ್ಲೇನಹಳ್ಳಿ ಸುಜಾತ(35) ಮೃತ ಮಹಿಳೆ. ತಮ್ಮ ಜಮೀನಿನಲ್ಲಿದ್ದ ದನ, ಕರುಗಳನ್ನು ಹೊಡೆದುಕೊಂಡು ಬರಲು ಹೋಗಿದ್ದ ವೇಳೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ಕುತ್ತಿಗೆ ಹಿಡಿದು ಎಳೆದಾಡಿದ್ದರಿಂದ ತೀವ್ರ ರಕ್ತಸ್ರಾವವಾಗಿ ಸಾವನ್ನಪಿದ್ದಾರೆ. ಚಿರತೆ ಕುರಿಯನ್ನೂ ಕೊಂದಿದೆ.
ಸುಜಾತಾ ಕತ್ತಲಾದರೂ ಮನೆಗೆ ಬಾರದಿರುವುದನ್ನು ಕಂಡು ಪತಿ ಭೈರೇಗೌಡ ಹುಡುಕಿಕೊಂಡು ತಮ್ಮ ಜಮೀನಿನತ್ತ ತೆರಳಿದ್ದಾರೆ. ಜಮೀನಿನಲ್ಲಿ ಪತ್ನಿಯ ಮೃತದೇಹ ಪತ್ತೆಯಾಗಿದೆ. ಸಿಪಿಐ ಲೋಹಿತ್, ಚಿಕ್ಕನಾಯಕನಹಳ್ಳಿ ವಲಯ ಅರಣ್ಯಾಧಿಕಾರಿ ಅಮಿತ್, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಚಿರತೆ ಸೆರೆಗೆ ಮುಂದಾಗಿದ್ದಾರೆ.
ಅರೇಮಲ್ಲೇನಹಳ್ಳಿ ಸುತ್ತಮುತ್ತಲಿನ ಭಾಗದಲ್ಲಿ ಚಿರತೆಗಳ ಕಾಟ ಹೆಚ್ಚಾಗಿದೆ. ದನ, ಕರುಗಳನ್ನು ಕೊಂದು ಹಾಕುತ್ತಿದ್ದವು. ಈಗ ಮಹಿಳೆ ಪ್ರಾಣ ತೆಗೆದಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.