ADVERTISEMENT

ಕುಣಿಗಲ್| ಆತಂಕಕ್ಕೆ ಕಾರಣವಾಗಿದ್ದ ಚಿರತೆ ಅಂತೂ ಬೋನಿಗೆ...

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2022, 11:56 IST
Last Updated 31 ಡಿಸೆಂಬರ್ 2022, 11:56 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಕುಣಿಗಲ್: ತಾಲ್ಲೂಕಿನ ಅಮೃತೂರು ಹೋಬಳಿಯ ಚಿಕ್ಕರ್ಜುನಹಳ್ಳಿ ಗ್ರಾಮದ ಬಳಿ ಶನಿವಾರ 4 ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ.

ಕಳೆದ ಕೆಲ ದಿನಗಳಿಂದ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿತ್ತು.
ಶನಿವಾರ ಶಾಂತಮ್ಮ ಅವರ ತೋಟದ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.