ಪ್ರಜಾವಾಣಿ ವಾರ್ತೆ
ತುಮಕೂರು: ನಗರದ ಹೊರವಲಯ ಬೆಳಗುಂಬದಲ್ಲಿರುವ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ವಾಕ್ ಮತ್ತು ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆ ಬಳಿ ಮಂಗಳವಾರ ರಾತ್ರಿ ಚಿರತೆ ಮರಿ ಬೋನಿಗೆ ಬಿದ್ದಿದೆ.
ಕಳೆದ ಭಾನುವಾರ ಮತ್ತು ಸೋಮವಾರ ಶಾಲೆಯ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಶಾಲೆಯಿಂದ 200 ಮೀಟರ್ ದೂರದಲ್ಲಿ ಎರಡು ಬೋನು ಅಳವಡಿಸಿ, ಸಿಬ್ಬಂದಿ ನಿಯೋಜಿಸಲಾಗಿತ್ತು. ಮಂಗಳವಾರ ರಾತ್ರಿ ಚಿರತೆ ಸೆರೆಯಾಗಿದೆ.
‘ಶಾಲೆ ಬಳಿ ಅಳವಡಿಸಿದ್ದ ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಎರಡು ಚಿರತೆಗಳ ಓಡಾಟ ಕಾಣಿಸಿದೆ. ತಾಯಿ ಮತ್ತು ಮರಿ ಚಿರತೆ ಓಡಾಟ ಸೆರೆಯಾಗಿದೆ. ಮೂರರಿಂದ ನಾಲ್ಕು ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ಮೇಲಧಿಕಾರಿಗಳ ನಿರ್ದೇಶನದ ನಂತರ ಚಿರತೆಯನ್ನು ಸುರಕ್ಷಿತ ಸ್ಥಳದಲ್ಲಿ ಬಿಡಲಾಗುವುದು’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.