ADVERTISEMENT

ಚಿರತೆ ಮರಿ ಸೆರೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2023, 16:37 IST
Last Updated 11 ಫೆಬ್ರುವರಿ 2023, 16:37 IST
   

ಗುಬ್ಬಿ: ಒಂದು ವರ್ಷದ ಹೆಣ್ಣು ಚಿರತೆ ಮರಿ ಶನಿವಾರ ರಾತ್ರಿ ಬೋನಿಗೆ ಬಿದ್ದಿದೆ.

ತಾಲ್ಲೂಕಿನ ಕಸಬಾ ಹೋಬಳಿ ಮಡೇನಹಳ್ಳಿ ಗ್ರಾಮದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು, ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು. ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಚಿರತೆ ಮರಿ ಸೆರೆಯಾಗಿದೆ.

ಮರಿ ಸೆರೆಯಾಗಿದ್ದು, ತಾಯಿ ಚಿರತೆ ಇರುವ ಬಗ್ಗೆ ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಆರ್ ಎಫ್ ಓ ದುಗ್ಗಪ್ಪ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.