
ಪ್ರಜಾವಾಣಿ ವಾರ್ತೆತಿಪಟೂರು: ತಿಪಟೂರು ನಗರದ ಗಾಂಧಿನಗರ ಪಕ್ಕದಲ್ಲಿರುವ ಕೃಷ್ಣಮೂರ್ತಿ ಅವರ ತೋಟದ ಬಾವಿಗೆ ಇಂದು ಬೆಳಗ್ಗೆ ಚಿರತೆ ಬಿದ್ದಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.
ಘಟನೆ ತಿಳಿದ ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಚಿರತೆಯನ್ನು ಸುರಕ್ಷಿತವಾಗಿ ಹಿಡಿಯುವಂತೆ ಮನವಿ ಮಾಡಿದರು. ಆದರೆ ಮಧ್ಯಾಹ್ನವಾದರೂ ಸಹ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.