
ತುಮಕೂರು: ಜಿಲ್ಲೆಯ 50ಕ್ಕೂ ಹೆಚ್ಚು ಗ್ರಾಮಗಳಲ್ಲಿ ಚಿರತೆ– ಮಾನವ ಸಂಘರ್ಷ ಮುಂದುವರಿದಿದೆ. ಚಿರತೆ ಸೆರೆಗೆ ಕೂಡಲೇ 31 ಹೊಸ ಬೋನು ಖರೀದಿಸುವಂತೆ ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಸೂಚಿಸಿದರು.
ನಗರದ ಅರಣ್ಯ ಇಲಾಖೆ ಕಚೇರಿಯಲ್ಲಿ ಶುಕ್ರವಾರ ಸಂಜೆ ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿ, ಯಾವುದೇ ಗ್ರಾಮದ ಬಳಿ ಚಿರತೆ ಕಾಣಿಸಿಕೊಂಡರೆ ತುರ್ತಾಗಿ ಬೋನು ಅಳವಡಿಸಬೇಕು ಎಂದರು.
ಭೂಮಿಗೆ ಬಂಗಾರದ ಬೆಲೆ ಬಂದಿದ್ದು, ಕೆಲವರು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಯತ್ನಿಸುತ್ತಿದ್ದಾರೆ. ಅಂತವರ ವಿರುದ್ಧ ಅರಣ್ಯ ಅಪರಾಧ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಕಡಿಮೆ ಇದ್ದು, ಒತ್ತುವರಿಯೂ ಆಗಿದೆ. ನಕಲಿ ದಾಖಲೆ ಸೃಷ್ಟಿಸಿ ಅರಣ್ಯದ ಮೇಲೆ ಹಕ್ಕು ಚಲಾಯಿಸುತ್ತಿದ್ದಾರೆ. ಕೆಲವು ಕಡೆ ಅಕ್ರಮ ಮಂಜೂರಾತಿ ಆಗಿದೆ. ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ತಿಪಟೂರಿನಲ್ಲಿ ಕಮಾಂಡ್ ಸೆಂಟರ್ ತೆರೆಯಲು ಕ್ರಮ ವಹಿಸುವಂತೆ ನಿರ್ದೇಶಿಸಿದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.