ADVERTISEMENT

ತುಮಕೂರು: ಬೋನಿಗೆ ಬಿದ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2020, 12:04 IST
Last Updated 12 ಏಪ್ರಿಲ್ 2020, 12:04 IST
ಶಿರಾ ತಾಲ್ಲೂಕಿನ ದಾಸರಹಳ್ಳಿ ಗ್ರಾಮದಲ್ಲಿ  ಭಾನುವಾರ ಬೆಳಿಗ್ಗೆ ಬೋನಿಗೆ ಬಿದ್ದಿರುವ ಚಿರತೆ.
ಶಿರಾ ತಾಲ್ಲೂಕಿನ ದಾಸರಹಳ್ಳಿ ಗ್ರಾಮದಲ್ಲಿ  ಭಾನುವಾರ ಬೆಳಿಗ್ಗೆ ಬೋನಿಗೆ ಬಿದ್ದಿರುವ ಚಿರತೆ.   

ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯ ದಾಸರಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.

ತಾಲ್ಲೂಕಿನ ದಾಸರಹಳ್ಳಿ, ಹಾಲ್ ದೊಡ್ಡೇರಿ, ಸಲುಪರಹಳ್ಳಿ ಮೊದಲಾದ ಗ್ರಾಮಗಳ ಸುತ್ತಮುತ್ತ ಚಿರತೆ ಓಡಾಡುತ್ತಿದೆ ಎಂದು ರೈತರಿಂದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆ ಹಿಡಿಯಲು 5 ದಿನದ ಹಿಂದೆ ಬೋನ್‌ ಇಟ್ಟಿದ್ದರು.

ಸುಮಾರು 3ರಿಂದ 4 ವರ್ಷದ ಚಿರತೆ ಇದಾಗಿದ್ದು, ಇದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸದ್ಯಕ್ಕೆ ಕಟಾವೀರನಹಳ್ಳಿ ಗ್ರಾಮದ ನರ್ಸರಿಯಲ್ಲಿ ಇಟ್ಟಿದ್ದಾರೆ.

ADVERTISEMENT

ತಹಶೀಲ್ದಾರ್ ನಾಹಿದಾ ಜಮ್ ಜಮ್, ತಾಲ್ಲೂಕು ಅರಣ್ಯಾಧಿಕಾರಿ ರಾಧಾ, ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಪಿಎಸ್ಐ ಶ್ರೀನಿವಾಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.