ADVERTISEMENT

ಗುಬ್ಬಿ: ಟ್ರಾನ್ಸ್‌ಫಾರ್ಮರ್‌ನಲ್ಲಿ ಸಿಲುಕಿ ಚಿರತೆ ಸಾವು!

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2022, 9:33 IST
Last Updated 13 ಡಿಸೆಂಬರ್ 2022, 9:33 IST
ಚಿರತೆ
ಚಿರತೆ   

ಗುಬ್ಬಿ: ವಿದ್ಯುತ್ ಪರಿವರ್ತಕಕ್ಕೆ ಆಕಸ್ಮಿಕವಾಗಿ ಸಿಲುಕಿ ಶಾರ್ಟ್ ಸರ್ಕೀಟ್‌ನಿಂದ 3 ವರ್ಷದ ಹೆಣ್ಣು ಚಿರತೆ ಮೃತಪಟ್ಟಿರುವ ಘಟನೆ ಸೋಮವಾರ ತಡರಾತ್ರಿ ಕಡಬ ಹೋಬಳಿ ಕರೇಗೌಡನಹಳ್ಳಿ ಸರ್ಕಾರಿ ಶಾಲೆಯ ಹಿಂಭಾಗ ನಡೆದಿದೆ.

ಮಂಗಳವಾರ ವಿಷಯ ತಿಳಿದ ವಲಯ ಅರಣ್ಯ ಅಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿ ಚಿರತೆ ಶವ ಕೆಳಗೆ ಇಳಿಸಿತು. ನಂತರ ಪಶು ವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ನಡೆಸಿದರು.

ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಚಿರತೆ ಸೆರೆ ಹಿಡಿಯಲು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ADVERTISEMENT

ತಾಲ್ಲೂಕಿನ ಅನೇಕ ಭಾಗಗಳಲ್ಲಿ ಚಿರತೆ ಹಾವಳಿ ಸಾಮಾನ್ಯವಾಗಿದ್ದು, ಆಯಕಟ್ಟಿನ ಜಾಗಗಳಲ್ಲಿ ಬೋನುಗಳನ್ನು ಇಟ್ಟು ಕಟ್ಟೆಚ್ಚರ ವಹಿಸಲಾಗಿದೆ ಎಂದು ವಲಯ ಅರಣ್ಯ ಅಧಿಕಾರಿ ದುಗ್ಗಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.