ADVERTISEMENT

‘ಜಿಲ್ಲೆ ಪ್ರವಾಸೋದ್ಯಮ ಕೇಂದ್ರವಾಗಲಿ’

ವಿಶ್ವ ಪ್ರವಾಸೋದ್ಯಮದ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 5:06 IST
Last Updated 28 ಸೆಪ್ಟೆಂಬರ್ 2022, 5:06 IST
ತೋವಿನಕೆರೆ ಸಮೀಪದ ಸಿದ್ಧರಬೆಟ್ಟದಲ್ಲಿ ಮಂಗಳವಾರ ಜಿಲ್ಲಾ ಆಡಳಿತದಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಸಕ ಡಾ.ಜಿ.ಪರಮೇಶ್ವರ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಗೌರಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ತಹಶೀಲ್ದಾರ್ ನಹಿದಾ ಜಮ್‌ ಜಮ್‌, ಅಯುಷ್ ಇಲಾಖೆಯ ಭವ್ಯಾ, ಬೂದುಗವಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ ಉಪಸ್ಥಿತರಿದ್ದರು
ತೋವಿನಕೆರೆ ಸಮೀಪದ ಸಿದ್ಧರಬೆಟ್ಟದಲ್ಲಿ ಮಂಗಳವಾರ ಜಿಲ್ಲಾ ಆಡಳಿತದಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಸಕ ಡಾ.ಜಿ.ಪರಮೇಶ್ವರ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಗೌರಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ತಹಶೀಲ್ದಾರ್ ನಹಿದಾ ಜಮ್‌ ಜಮ್‌, ಅಯುಷ್ ಇಲಾಖೆಯ ಭವ್ಯಾ, ಬೂದುಗವಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ ಉಪಸ್ಥಿತರಿದ್ದರು   

ತೋವಿನಕೆರೆ: ಜಿಲ್ಲೆಯನ್ನು ಪ್ರವಾಸೋದ್ಯಮ ಕೇಂದ್ರವಾಗಿ ರೂಪಿಸಿ ಆರ್ಥಿಕ, ಧಾರ್ಮಿಕವಾಗಿ ಅಭಿವೃದ್ಧಿ ಪಡಿಸಬಹುದು ಎಂದು ಶಾಸಕ ಡಾ.ಜಿ.ಪರಮೇಶ್ವರ ಸಲಹೆ ಮಾಡಿದರು.

ತೋವಿನಕೆರೆ ಸಮೀಪದ ಸಿದ್ಧರಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮದ ದಿನದ ಅಂಗವಾಗಿ ಜಿಲ್ಲಾ ಆಡಳಿತದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸಿದ್ಧರಬೆಟ್ಟವು ಸಾವಿರಾರು ತಪಸ್ವಿಗಳ ಪುಣ್ಯ ಕ್ಷೇತ್ರವಾಗಿದ್ದು, ಲಕ್ಷಾಂತರ ಯಾತ್ರಿಕರನ್ನು ಆಕರ್ಷಿಸುತ್ತಿದೆ. ಜಿಲ್ಲೆಯಲ್ಲಿ ನೂರಾರು ದೇವಾಲಯಗಳಿದ್ದು, ಪ್ರಕೃತಿ ಸಂಪತ್ತು, ವನ್ಯಮೃಗಗಳ ಬೀಡಾಗಿದೆ. ಅವುಗಳನ್ನು ನಾವು ಮುನ್ನೆಲೆಗೆ ತರಬೇಕಿದೆ’ ಎಂದರು.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ‘ಪ್ರವಾಸಿ ಸ್ಥಳಗಳು ಆಯಾ ಪ್ರದೇಶದ ಸಂಸ್ಕೃತಿ ಪ್ರತಿನಿಧಿಸುತ್ತವೆ. ಪ್ರವಾಸವು ನಮ್ಮ ಜೀವನದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರುತ್ತದೆ. ಮುಂದಿನ ದಿನಗಳಲ್ಲಿ ಸಿದ್ಧರಬೆಟ್ಟ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವಂತಾಗಲಿ. ಪ್ರವಾಸಿ ತಾಣ ಉಳಿವಿಗೆ ಎಲ್ಲರ ಸಹಕಾರ ಅಗತ್ಯ’ ಎಂದು ತಿಳಿಸಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿಗಳಾದ ಸೋಮಪ್ಪ ಕಡಕೋಳ, ವಿ.ಅಜಯ್‌, ತಹಶೀಲ್ದಾರ್ ನಹಿದಾ ಜಮ್‌ ಜಮ್‌, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಗೌರಿ, ಅಯುಷ್ ಇಲಾಖೆಯ ಭವ್ಯಾ, ಬೂದುಗವಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ ಇತರರು ಭಾಗವಹಿಸಿದ್ದರು.

ಸಿದ್ಧರ ಬೆಟ್ಟದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ನೂತನ ಮೆಟ್ಟಿಲು, ರೈಲಿಂಗ್ಸ್ ಅಳವಡಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ವಿಶ್ವ ಪ್ರವಾಸೋದ್ಯಮ ದಿನದ ಪ್ರಯುಕ್ತ ಮಕ್ಕಳಲ್ಲಿ ಪ್ರವಾಸೋದ್ಯಮದ ಬಗ್ಗೆ ಅರಿವು ಮೂಡಿಸಲು ಸುರ್ವಣಮುಖಿ ಪ್ರೌಢ ಶಾಲೆ ಹಾಗೂ ಮಲ್ಲೇಕಾವು ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢ ಶಾಲೆಗಳಲ್ಲಿ ಏರ್ಪಡಿಸಿದ್ದ ಪ್ರಬಂಧ, ಚಿತ್ರಕಲಾ, ರಸಪ್ರಶ್ನೆ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.