ADVERTISEMENT

ನೆಲಮೂಲ ಸಂಸ್ಕೃತಿಯ ಕಾವ್ಯ ಬರಲಿ

ತಾಲ್ಲೂಕು ಸಾಹಿತ್ಯ ಸಮ್ಮೇಳನದಲ್ಲಿ ಬರಹಗಾರ ತುರುವೇಕೆರೆ ಪ್ರಸಾದ್ ಸಲಹೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 7:15 IST
Last Updated 15 ಫೆಬ್ರುವರಿ 2021, 7:15 IST
ತುರುವೇಕೆರೆಯ ಕೆ.ಹಿರಣ್ಣಯ್ಯ ಬಯಲು ರಂಗಮಂದಿರದಲ್ಲಿ ನಡೆದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿ ಜರುಗಿತು
ತುರುವೇಕೆರೆಯ ಕೆ.ಹಿರಣ್ಣಯ್ಯ ಬಯಲು ರಂಗಮಂದಿರದಲ್ಲಿ ನಡೆದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿ ಜರುಗಿತು   

ತುರುವೇಕೆರೆ: ಯುವ ಕವಿಗಳು ಶಿಷ್ಟ ಸಾಹಿತ್ಯದ ಜೊತೆಗೆ ನೆಲ ಮೂಲ ಪರಂಪರೆಯಾದ ಜನಪದ ಸೊಗಡನ್ನಿಟ್ಟುಕೊಂಡು ಕಾವ್ಯವನ್ನು ಹೆಚ್ಚು ಬರೆಯಬೇಕು ಎಂದು ಬರಹಗಾರ ತುರುವೇಕೆರೆ ಪ್ರಸಾದ್ ಕವಿಗಳಿಗೆ ಸಲಹೆ ನೀಡಿದರು.

ಪಟ್ಟಣದ ಕೆ.ಹಿರಣ್ಣಯ್ಯ ಬಯಲು ರಂಗಮಂದಿರದಲ್ಲಿ ನಡೆದ ತಾಲ್ಲೂಕಿನ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯುವ ಕವಿಗಳು ಹೆಚ್ಚು ಅಧ್ಯಯನಶೀಲರಾಗಿ ತಮ್ಮ ಅನುಭವಗಳೊಂದಿಗೆ ಕಾವ್ಯ ಬರೆದರೆ ಆ ಕಾವ್ಯದ ಸಾರ್ಥಕತೆ ಹೆಚ್ಚಾಗುತ್ತದೆ. ಕಾವ್ಯದ ಎಲ್ಲ ಪ್ರಕಾರಗಳಲ್ಲಿಯೂ ಕವಿಗಳು ಕೃಷಿ ಮಾಡಿದರೆ ಕನ್ನಡ ಸಾಹಿತ್ಯದ ಸಂಪತ್ತು ಮತ್ತಷ್ಟು ಸಂಮೃದ್ಧವಾಗಿ ಬೆಳೆಯಲಿದೆ ಎಂದರು.

ADVERTISEMENT

ಕವಿ ಪಾಂಡುರಂಗಯ್ಯ ಎ.ಹೊಸಹಳ್ಳಿ ಮಾತನಾಡಿ, ಕನ್ನಡ ಸಾಹಿತ್ಯದ ಸಾರಸ್ವತ ಲೋಕದಲ್ಲಿ ಕನ್ನಡ ಕಾವ್ಯ ಅತ್ಯಂತ ಶ್ರೀಮಂತ ಪರಂಪರೆ ಹೊಂದಿದೆ. ಯಾವುದೇ ಕಾವ್ಯ ನೋವು, ದುಃಖ, ಶೋಷಣೆ, ಅನ್ಯಾಯ ಮೊದಲಾದ ಸಂಕಟಗಳನ್ನು ತನ್ನ ಒಡಲಲ್ಲಿ ಧರಿಸಿಕೊಂಡೇ ರಚನೆಯಾಗುತ್ತದೆ ಎಂದರು.

ಇದೇ ವೇಳೆ ಸುಮಾರು 15ಕ್ಕೂ ಹೆಚ್ಚುಕವಿಗಳು ಕವಿತೆ ವಾಚನ ಮಾಡಿದರು.

ಗೋಷ್ಠಿಯಲ್ಲಿ ಸಮ್ಮೇಳನಾಧ್ಯಕ್ಷ ಪ್ರೊ.ಜಿ.ಬಿ.ಶಿವರಾಜ್, ಜಿಲ್ಲಾ ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಕವಯಿತ್ರಿ ಶೈಲಾ ನಾಗರಾಜ್, ಸಾಹಿತಿ ಕೆ.ಭೈರಪ್ಪ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.