ADVERTISEMENT

ಕಾರ್ಮಿಕರು ಸರ್ಕಾರದ ಸೌಲಭ್ಯ ಪಡೆಯಲಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2019, 7:30 IST
Last Updated 7 ಸೆಪ್ಟೆಂಬರ್ 2019, 7:30 IST
ಕಟ್ಟಡ ಕಾರ್ಮಿಕರಿಗೆ ಧನಸಹಾಯ ಯೋಜನಾ ಪ್ರಮಾಣ ಪತ್ರಗಳನ್ನು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಶುಕ್ರವಾರ ಫಲಾನುಭವಿಗಳಿಗೆ ವಿತರಣೆ ಮಾಡಿದರು
ಕಟ್ಟಡ ಕಾರ್ಮಿಕರಿಗೆ ಧನಸಹಾಯ ಯೋಜನಾ ಪ್ರಮಾಣ ಪತ್ರಗಳನ್ನು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಶುಕ್ರವಾರ ಫಲಾನುಭವಿಗಳಿಗೆ ವಿತರಣೆ ಮಾಡಿದರು   

ತುಮಕೂರು: ಜಿಲ್ಲೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ಮದುವೆ ಧನಸಹಾಯ ಹಾಗೂ ಶೈಕ್ಷಣಿಕ ಧನ ಸಹಾಯದ ಮಂಜೂರಾತಿ ಆದೇಶದ ಪ್ರತಿ ವಿತರಿಸಿ ಮಾತನಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಕಾರ್ಮಿಕ ಅಧಿಕಾರಿ ಸುಭಾಷ್ ಎಂ.ಆಲದಕಟ್ಟಿ ಮತ್ತಿತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.