ತುಮಕೂರಿನಲ್ಲಿ ಸೋಮವಾರ ಬಿಜೆಪಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್ ಇತರರು ಭಾಗವಹಿಸಿದ್ದರು
ತುಮಕೂರು: ಬಿ.ಆರ್.ಅಂಬೇಡ್ಕರ್ ಅವರ ಸಮಾನತೆಯ ಭಾಷಣ ಕೇಳಿದರೆ ಸಾಲದು, ಅದನ್ನು ಆಚರಣೆಗೆ ತರಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ದೇಶದ ಎಲ್ಲರೂ ಸಮಾನತೆ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಅಂಬೇಡ್ಕರ್ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ್ದಾರೆ. ಬಿಜೆಪಿಯ ಧ್ಯೇಯವೂ ಇದೇ ಆಗಿದೆ. ಭಾವೈಕ್ಯತೆಯಿಂದ ಕೂಡಿದ ಉತ್ತಮ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಸಂಕಲ್ಪ ತೊಡಬೇಕು ಎಂದರು.
ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ‘ಸಮಾಜದಲ್ಲಿ ಅಸ್ಪೃಶ್ಯತೆ ನಿರ್ಮೂಲನೆ ಆಗುವ ತನಕ ಹಿಂದೂ ಧರ್ಮಕ್ಕೆ ಕಪ್ಪು ಚುಕ್ಕೆ ಉಳಿದಿರುತ್ತದೆ. ಅಸ್ಪೃಶ್ಯತೆ ಕಾರಣದಿಂದಲೇ ಅಂಬೇಡ್ಕರ್ ‘ನಾನು ಹಿಂದುವಾಗಿ ಹುಟ್ಟಿದ್ದೇನೆ, ಹಿಂದುವಾಗಿ ಸಾಯುವುದಿಲ್ಲ’ ಎಂದು ಬೌದ್ಧ ಧರ್ಮ ಸೇರಿದರು. ಅಸ್ಪೃಶ್ಯತೆಯಿಂದ ಹಿಂದೂಗಳು ಅನ್ಯ ಧರ್ಮಗಳಿಗೆ ಮತಾಂತರವಾಗುತ್ತಿದ್ದಾರೆ’ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಮುಖಂಡರಾದ ಬ್ಯಾಟರಂಗೇಗೌಡ, ಎಚ್.ಎನ್.ಚಂದ್ರಶೇಖರ್, ವಿನಯ್ ಬಿದರೆ, ಗಂಗರಾಜು, ಡಾ.ಎಸ್.ಪರಮೇಶ್, ದಿಲೀಪ್‍ಕುಮಾರ್, ಹನುಮಂತರಾಯಪ್ಪ, ಅಂಜನಮೂರ್ತಿ, ಕೆ.ವೇದಮೂರ್ತಿ, ನವಚೇತನ್, ಜ್ಯೋತಿ ತಿಪ್ಪೇಸ್ವಾಮಿ, ಗಾಯತ್ರಿ, ವಸಂತ, ನಳಿನಾ ಇತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.