ADVERTISEMENT

ಅತ್ಯಾಚಾರಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 29 ಮೇ 2025, 7:16 IST
Last Updated 29 ಮೇ 2025, 7:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಬ್ಬನಿಗೆ ಜೀವಾವಧಿ ಹಾಗೂ ಮತ್ತೊಬ್ಬನಿಗೆ 20 ವರ್ಷ ಶಿಕ್ಷೆ ವಿಧಿಸಿ ಪೋಕ್ಸೊ ನ್ಯಾಯಾಲಯ ಆದೇಶಿಸಿದೆ.

ತಿಪ್ಪೇಶ್ ಕುಮಾರ್‌ಗೆ ಜೀವಾವಧಿ ಶಿಕ್ಷೆ, ₹2 ಲಕ್ಷ ದಂಡ ವಿಧಿಸಲಾಗಿದೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ 2022 ಮಾರ್ಚ್ 15ರಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಮತ್ತೊಂದು ಪ್ರಕರಣದಲ್ಲಿ ಆಟೊ ಚಾಲಕ ಶಾಂತಿನಗರದ ಸೈಯದ್ ಶಫಿಕ್ (40) ಎಂಬಾತನಿಗೆ 20 ವರ್ಷ ಶಿಕ್ಷೆ, ₹1 ಲಕ್ಷ ದಂಡ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ. ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ 2023 ಅಕ್ಟೋಬರ್ 19ರಂದು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ADVERTISEMENT

ಎರಡು ಪ್ರಕರಣಗಳಲ್ಲಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಎಸ್.ಆಶಾ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.