ADVERTISEMENT

‘ಹಿಂದೂ’ ಧರ್ಮವಲ್ಲ; ಲಿಂಗಾಯತ ಪ್ರತ್ಯೇಕ ಧರ್ಮ: ನಿಜಗುಣಪ್ರಭು ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 0:03 IST
Last Updated 28 ಸೆಪ್ಟೆಂಬರ್ 2025, 0:03 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ತುಮಕೂರು: ‘ಹಿಂದೂ ಎಂಬುದು ಒಂದು ಜೀವನ ವಿಧಾನವೇ ಹೊರತು ಅದು ಧರ್ಮವಲ್ಲ’ ಎಂದು ಮುಂಡರಗಿ ತೋಂಟದಾರ್ಯ ಮಠದ ನಿಜಗುಣಪ್ರಭು ತೋಂಟದಾರ್ಯ(ನಿಜಗುಣಾನಂದ) ಸ್ವಾಮೀಜಿ ಅಭಿಪ್ರಾಯಪಟ್ಟರು. 

ADVERTISEMENT

ನಗರದಲ್ಲಿ ಶನಿವಾರ ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ರಾಜ್ಯ ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಏರ್ಪಡಿಸಿದ್ದ ವಚನ ಸಂವಾದದಲ್ಲಿ ವಿದ್ಯಾರ್ಥಿನಿಯೊಬ್ಬರ ಪ್ರಶ್ನೆಗೆ ಉತ್ತರಿಸಿದರು.

‘ಲಿಂಗಾಯತ ಬಸವಣ್ಣನ ಸ್ಥಾಪಿಸಿದ ಧರ್ಮ. ವಚನ ಸಾಹಿತ್ಯವೇ ಧರ್ಮ ಗ್ರಂಥ. ಸಕಲರಿಗೂ ಒಳಿತನ್ನು ಬಯಸುವುದೇ ನಿಜವಾದ ಧರ್ಮ. ಆದೇ ಬಸವ ಧರ್ಮ ಅಥವಾ ಲಿಂಗಾಯತ ಧರ್ಮ. ಹಾಗಾಗಿ ಲಿಂಗಾಯತ ಪ್ರತ್ಯೇಕ ಧರ್ಮ’ ಎಂದರು.

ಲಿಂಗಾಯತ ಧರ್ಮಕ್ಕೆ ಬಸವಣ್ಣನೇ ಗುರು, ವಚನವೇ ಗ್ರಂಥ. ಲಿಂಗಾಯತ ಮಠಾಧೀಶರಲ್ಲಿ ತಾತ್ವಿಕ ಭಿನ್ನಾಭಿಪ್ರಾಯಗಳಿವೆ. ಹಾಗಾಗಿ ಸುಮಾರು 200ಕ್ಕೂ ಹೆಚ್ಚು ಲಿಂಗಾಯತ ಮಠಾಧೀಶರು ಬಸವ ಸಂಸ್ಕೃತಿ ಅಭಿಯಾನದ ಹೆಸರಿನಲ್ಲಿ ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದು ಜನರಿಗೆ ಸತ್ಯ ತಿಳಿಸಲಾಗುತ್ತಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.