ತುಮಕೂರು: ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಜಾರಿ ಕುರಿತು ರಚಿಸಿದ್ದ ತಾಂತ್ರಿಕ ಸಮಿತಿ ಕೇವಲ ಕಣ್ಣೊರೆಸುವ ತಂತ್ರ ಎಂದು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ನಿವೃತ್ತರನ್ನು, ನಮ್ಮ ಕೈಕೆಳಗೆ ಇರುವವರನ್ನು ಸಮಿತಿಗೆ ನೇಮಿಸಿದರೆ, ನಾವು ಹೇಳಿದಂತೆ ವರದಿ ಬರೆದು ಕೊಡುತ್ತಾರೆ. ಸಮಿತಿ ಸದಸ್ಯರನ್ನು ಅವರ ಪಾಡಿಗೆ ಅವರು ಕೆಲಸ ಮಾಡಲು ಬಿಟ್ಟರೆ ಸರಿಯಾದ ವರದಿ ನೀಡುತ್ತಾರೆ. ಜನರಿಗೆ ಅನಾನುಕೂಲವಾಗದ ರೀತಿಯಲ್ಲಿ ಕಾಮಗಾರಿ ನಡೆಸಬೇಕು ಎಂದರು.
ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ನಿರ್ಮಾಣದಿಂದ ಹೇಮಾವತಿ ನೀರು ಹರಿಯುವ ತಾಲ್ಲೂಕುಗಳಿಗೆ ತೊಂದರೆಯಾಗುತ್ತದೆ. ಯೋಜನೆ ಪ್ರಾರಂಭದಿಂದಲೂ ವಿರೋಧ ವ್ಯಕ್ತಪಡಿಸಿದ್ದೇನೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.