ADVERTISEMENT

ಪರಿಷತ್ ಚುನಾವಣೆ: ಮದ್ಯ ಮಾರಾಟ ನಿಷೇಧ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2020, 4:05 IST
Last Updated 27 ಅಕ್ಟೋಬರ್ 2020, 4:05 IST

ತುಮಕೂರು: ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಮತದಾನ ಅ. 28ರಂದು ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಅ. 26ರ ಸಂಜೆ 5 ಗಂಟೆಯಿಂದ ಅ. 28ರ ಸಂಜೆ 6 ಗಂಟೆವರೆಗೆ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ನಿಷೇಧಾಜ್ಞೆ ಅವಧಿಯಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಸಾಗಾಣಿಕೆ, ಶೇಖರಣೆ ನಿಷೇಧಿಸಿದ್ದು, ಎಲ್ಲಾ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT