ಸಾವು (ಪ್ರಾತಿನಿಧಿಕ ಚಿತ್ರ)
ತುಮಕೂರು: ನಗರದ ಬಟವಾಡಿ ಬಳಿಯ ಮಹಾಲಕ್ಷ್ಮಿ ಬಡಾವಣೆಯಲ್ಲಿ ಶನಿವಾರ ಸಂಜೆ ಕೊಟ್ಟ ಸಾಲ ವಾಪಸ್ ಕೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲು ಹೋಗಿದ್ದ ವ್ಯಕ್ತಿಯೇ ಕೊಲೆಯಾಗಿದ್ದಾನೆ.
ಕೋತಿತೋಪು ನಿವಾಸಿ ನಫೀಸ್ ಅಹ್ಮದ್ (33) ಕೊಲೆಯಾದವರು. ಕೊಲೆ ಆರೋಪಿ ಬಟವಾಡಿಯ ಫೈರೋಜ್ ಪಾಷಾ (34) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಫೈರೋಜ್ ಬಳಿ ನಫೀಸ್ ₹7 ಲಕ್ಷ ಸಾಲ ಪಡೆದಿದ್ದರು. ಹಣ ವಾಪಸ್ ಕೊಡುವಂತೆ ಪೀಡಿಸುತ್ತಿದ್ದರು. ನಫೀಸ್ ಮತ್ತೆ ಮತ್ತೆ ಹಣ ಕೇಳಬೇಡ ಎಂದು ಚಾಕು ಹಿಡಿದು ಬೆದರಿಸಲು ಹೋಗಿದ್ದರು. ಇದರಿಂದ ಕುಪಿತಗೊಂಡ ಫೈರೋಜ್ ಅದೇ ಚಾಕು ತೆಗೆದುಕೊಂಡು ಚುಚ್ಚಿ ಕೊಲೆ ಮಾಡಿದ್ದಾನೆ.
ನಫೀಸ್ ಟೈಲ್ಸ್ ವ್ಯಾಪಾರಿ. ಫೈರೋಜ್ ಬಟವಾಡಿ ಬಳಿ ಗ್ಯಾರೇಜ್ ಇಟ್ಟುಕೊಂಡು ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಹಣಕಾಸಿನ ವಿಚಾರಕ್ಕೆ ಸ್ನೇಹಿತರ ಮಧ್ಯೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಹೊಸ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಹೆಚ್ಚುವರಿ ವರಿಷ್ಠಾಧಿಕಾರಿ ಸಿ.ಗೋಪಾಲ್, ಡಿವೈಎಸ್‌ಪಿ ಕೆ.ಆರ್.ಚಂದ್ರಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.