ADVERTISEMENT

ಸ್ಥಳೀಯ ಸಂಸ್ಥೆ ಚುನಾವಣೆ: ಕಾರ್ಮಿಕರಿಗೆ ವೇತನ ಸಹಿತ ರಜೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಮೇ 2019, 20:25 IST
Last Updated 24 ಮೇ 2019, 20:25 IST

ತುಮಕೂರು : ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಮೇ 29ರಂದು ಚುನಾವಣೆ ನಡೆಯಲಿದ್ದು, ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯ ಅರ್ಹ ಮತದಾರರಾಗಿರುವ ಎಲ್ಲಾ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಮೇ 29ರಂದು ವೇತನ ಸಹಿತ ರಜೆ ನೀಡಬೇಕು ಎಂದು ಮಾಲೀಕರಿಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳನ್ನೊಳಗೊಂಡಂತೆ), ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಔದ್ಯೋಗಿಕ ಸಂಸ್ಥೆಗಳು, ಮತ್ತಿತರ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಹಾಗೂ ಎಲ್ಲಾ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವವರಿಗೆ ಮತ ಚಲಾಯಿಸಲು ಅನುವಾಗುವಂತೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ ಎಂದು ಆಯೋಗ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT