ತುಮಕೂರು: ಮಾರ್ಚ್‌ನಲ್ಲಿ ನಡೆದ ಲೋಕ ಅದಾಲತ್‍ನಲ್ಲಿ ಜಿಲ್ಲೆಯಲ್ಲಿ ಬಾಕಿಯಿದ್ದ 1,01,909 ಪ್ರಕರಣಗಳ ಪೈಕಿ 11,780 ಪ್ರಕರಣ, 63,852 ವ್ಯಾಜ್ಯ ಪೂರ್ವ ಪ್ರಕರಣ ಸೇರಿ ಒಟ್ಟು 75,632 ಪ್ರಕರಣ ವಿಲೇವಾರಿ ಮಾಡಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಜಯಂತಕುಮಾರ್ ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ದುರ್ಬಲ ವರ್ಗಗಳಿಗೆ ಉಚಿತವಾಗಿ ಮತ್ತು ಕಾನೂನು ಸೇವೆ ಒದಗಿಸುವ ಉದ್ದೇಶದಿಂದ ಜುಲೈ 12ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯ (ಲೋಕ ಅದಾಲತ್) ಹಮ್ಮಿಕೊಳ್ಳಲಾಗಿದೆ. ಜನರು ಇದರ ಪ್ರಯೋಜನ ಪಡೆಯಬಹುದು. ಬಾಕಿ ಇರುವ ಪ್ರಕರಣ ಶೀಘ್ರವಾಗಿ, ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದರು.
ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಕಾರ್ಮಿಕ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕ ಪ್ರಕರಣ ಸೇರಿದಂತೆ ವ್ಯಾಜ್ಯ ಪೂರ್ವ ಪ್ರಕರಣ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಅಪಘಾತ ಪರಿಹಾರ ನ್ಯಾಯಾಧಿಕರಣ ಒಳಗೊಂಡಂತೆ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣ ಶೀಘ್ರವಾಗಿ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ‘ಲೋಕ ಅದಾಲತ್‍ನಲ್ಲಿ ಆಗುವ ತೀರ್ಮಾನವೇ ಅಂತಿಮ. ಪ್ರಕರಣ ಇತ್ಯರ್ಥದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಆಸಕ್ತರು dlsatumkur1@gmail.com ಮೇಲ್ ಅಥವಾ ದೂರವಾಣಿ 0816-2255133 ಸಂಪರ್ಕಿಸಬಹುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.