ADVERTISEMENT

ಫೆ. 11ರಂದು ರಾಷ್ಟ್ರೀಯ ಲೋಕ ಅದಾಲತ್

ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2023, 15:19 IST
Last Updated 7 ಫೆಬ್ರುವರಿ 2023, 15:19 IST
ಕೆ.ಬಿ.ಗೀತಾ
ಕೆ.ಬಿ.ಗೀತಾ   

ತುಮಕೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿಗಳು, ಜನತಾ ನ್ಯಾಯಾಲಯಗಳಲ್ಲಿ ಫೆ. 11ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ.ಗೀತಾ ಹೇಳಿದರು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಹಮ್ಮಿಕೊಳ್ಳಲಾಗಿದೆ. ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಯಾವುದೇ ಶುಲ್ಕ ಇಲ್ಲದೆ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.

ಲೋಕ ಅದಾಲತ್‌ನಲ್ಲಿ ಭಾಗವಹಿಸಿ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಿಕೊಂಡರೆ ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ನ್ಯಾಯಾಧೀಶರು ಇತರೆ ಪ್ರಕರಣಗಳತ್ತ ಗಮನ ಹರಿಸಲು ಸಾಧ್ಯವಾಗಲಿದೆ. ಲೋಕ ಅದಾಲತ್‌ನಲ್ಲಿ ಇತ್ಯರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ ಎಂದು ಮಾಹಿತಿ ನೀಡಿದರು.

ADVERTISEMENT

ಡಿವೈಎಸ್‌ಪಿ ಧರ್ಮೇಂದ್ರ, ನಗರ ಸಂಚಾರ ವಿಭಾಗದ ಸರ್ಕಲ್ ಇನ್ಸ್‌ಪೆಕ್ಟರ್ ಶುಭಾಂಬಿಕ, ದಿನೇಶ್ ಕುಮಾರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನರಸಿಂಹಮೂರ್ತಿ, ಲತಾ ಉಪಸ್ಥಿತರಿದ್ದರು.

**
ಸಂಪರ್ಕ ಮಾಹಿತಿ

ಮಾಹಿತಿಗಾಗಿ ಪ್ರಾಧಿಕಾರ ಮತ್ತು ಕಾನೂನು ಸೇವಾ ಸಮಿತಿ ಈ ಮೇಲ್ ವಿಳಾಸ: dslatumkur1@gmail.com ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಚೇರಿ ದೂರವಾಣಿ 0816–2255133, ಮೊ 9483899033, ಸಹಾಯವಾಣಿ 1800–42590900 ಸಂಪರ್ಕಿಸಬಹುದು. ಖುದ್ದು ಹಾಜರಾಗಿಯೂ ಇತ್ಯರ್ಥ ಪಡಿಸಿಕೊಳ್ಳಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.