ತುಮಕೂರು: ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ಲೋಕಾಯುಕ್ತರು ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ನಗರದ ಆರ್.ಟಿ.ನಗರದಲ್ಲಿರುವ ಮನೆ ಮೇಲೆ ಲೋಕಾಯುಕ್ತ ಡಿವೈಎಸ್‌ಪಿಗಳಾದ ಮಂಜುನಾಥ್ ಹಾಗೂ ಹರೀಶ್ ನೇತೃತ್ವದ ತಂಡ ದಾಳಿ ನಡೆಸಿ, ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದೆ. ಬೆಳಗ್ಗೆಯಿಂದ ನಿರಂತರವಾಗಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿಸಿದ್ದಾರೆ.
ದಾಖಲೆಗಳ ಪರಿಶೀಲನೆ ನಡೆದಿದೆ. ಏನೆಲ್ಲ ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.