ತುಮಕೂರು: ನಗರದ ಕೆಐಎಡಿಬಿ ಎಇಇ ರಾಜೇಶ್ ಅವರಿಗೆ ಸಂಬಂಧಿಸಿದ ಮನೆ, ಕಚೇರಿ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಗರದ ಎಸ್ಐಟಿ ಕಾಲೇಜು ಬಳಿ ಇರುವ ಕೆಐಎಡಿಬಿ ಕಚೇರಿ, ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿರುವ ಅವರ ತಂದೆಯ ಮನೆ, ಬೆಂಗಳೂರಿನ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ಕಡೆ ಏಕ ಕಾಲಕ್ಕೆ ದಾಳಿ ನಡೆಸಿದೆ. ಲೋಕಾಯುಕ್ತ ಪೊಲೀಸರು ಮನೆ ಮತ್ತು ಕಚೇರಿಯಲ್ಲಿ ದಾಖಲೆ ಪರಿಶೀಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.