ADVERTISEMENT

ತುಮಕೂರು: ಎರಡು ಲಾರಿಗಳ ನಡುವೆ ಅಪಘಾತ, ಸ್ಥಳದಲ್ಲೇ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 25 ಮೇ 2022, 3:49 IST
Last Updated 25 ಮೇ 2022, 3:49 IST
ಅಪಘಾತದ ದೃಶ್ಯ
ಅಪಘಾತದ ದೃಶ್ಯ   

ತುಮಕೂರು: ಗುಬ್ಬಿ ಪಟ್ಟಣದ ಹೊರವಲಯದ ಸಿಂಗೋನಹಳ್ಳಿ ಸೇತುವೆ ಬಳಿ ಬುಧವಾರ ಬೆಳಿಗ್ಗೆ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾನೆ.

ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕೋಳಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬಂದ ಪೊಲೀಸರು ವಾಹನ ತೆರವುಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT