ADVERTISEMENT

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಲಾರಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 4:30 IST
Last Updated 26 ಜುಲೈ 2022, 4:30 IST
ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಲಾರಿ
ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಲಾರಿ   

ತುಮಕೂರು: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿಯೇ ಹೊತ್ತಿ ಉರಿದ ಘಟನೆ ತಾಲ್ಲೂಕಿನ ಗೂಳೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ.

ಎಳನೀರು ತುಂಬಿಕೊಂಡು ತುಮಕೂರಿನ ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿದ್ದು, ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.

ಗೂಳೂರು ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ರಸ್ತೆ ವಿಭಜಕವೇ ಅಪಘಾತಕ್ಕೆ ಕಾರಣ ಎಂದು ಗ್ರಾಮಸ್ಥರು ದೂರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.