ADVERTISEMENT

ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

ಡಿವೈಎಸ್‌ಪಿ ಎ. ರಾಮಚಂದ್ರಪ್ಪ ಅವರಿಗೆ ಜೆಎಂಎಫ್‍ಸಿ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

​ಪ್ರಜಾವಾಣಿ ವಾರ್ತೆ
Published 4 ಜನವರಿ 2025, 12:32 IST
Last Updated 4 ಜನವರಿ 2025, 12:32 IST
<div class="paragraphs"><p>ರಾಮಚಂದ್ರಪ್ಪ</p></div>

ರಾಮಚಂದ್ರಪ್ಪ

   

ಮಧುಗಿರಿ: ತಮ್ಮ ಕಚೇರಿಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪದಡಿ ಬಂಧಿತರಾಗಿದ್ದ ಡಿವೈಎಸ್‌ಪಿ ಎ. ರಾಮಚಂದ್ರಪ್ಪ ಅವರಿಗೆ ಜೆಎಂಎಫ್‍ಸಿ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಲೈಂಗಿಕ ದೌರ್ಜನ್ಯದ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ನಂತರ ಸೇವೆಯಿಂದ ಅಮಾನತು ಮಾಡಲಾಗಿತ್ತು. ನಂತರ ಮಧುಗಿರಿ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದರು. ಶುಕ್ರವಾರ ರಾತ್ರಿ ಬಂಧಿಸಿದ್ದ ಪೊಲೀಸರು ಶನಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನ್ಯಾಯಾಂಗ ಬಂಧನ ಆದೇಶದ ನಂತರ ತಾಲ್ಲೂಕು ಉಪ ಕಾರಾಗೃಹಕ್ಕೆ ಕಳುಹಿಸಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.