
ಪ್ರಜಾವಾಣಿ ವಾರ್ತೆ
ಚಿರತೆ
ಮಧುಗಿರಿ: ತಾಲ್ಲೂಕು ದೊಡ್ಡೇರಿ ಹೋಬಳಿಯ ಕೃಷ್ಣಸಾಗರ ಗ್ರಾಮದ ಸಣ್ಣ ರಂಗಪ್ಪ ಎಂಬುವರ
ಜಮೀನಿನ ಪೊದೆಯಲ್ಲಿ ಅಡಗಿ ಕುಳಿತಿದ್ದ ಎರಡು ವರ್ಷದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.
ಎರಡು ದಿನಗಳಿಂದ ಗ್ರಾಮದ ಸುತ್ತಮುತ್ತಲಿನ ಜಮೀನಿನಲ್ಲಿ ಚಿರತೆ ಆಗಾಗ್ಗೆ ಕಾಣಿಸಿಕೊಂಡು ರೈತರಲ್ಲಿ ಆತಂಕವನ್ನುಂಟು ಮಾಡಿತ್ತು. ಪೊದೆಯಲ್ಲಿ ಅಡಗಿ ಕುಳಿತ ಚಿರತೆಯನ್ನು ಬಲೆ ಬೀಸಿ ಸೆರೆ ಹಿಡಿಯಲಾಯಿತು. ಅರಣ್ಯ ಅಧಿಕಾರಿ ಸುರೇಶ್, ಮುತ್ತುರಾಜ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.