ADVERTISEMENT

ಮಧುಗಿರಿ ಲೋಕೋಪಯೋಗಿ ಇಲಾಖೆ ವ್ಯವಸ್ಥಾಪಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 12:15 IST
Last Updated 27 ಜನವರಿ 2023, 12:15 IST
   

ಮಧುಗಿರಿ: ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿಯ ವ್ಯವಸ್ಥಾಪಕ ಲಕ್ಷ್ಮಿನರಸಿಂಹಯ್ಯ (56) ನೆಲಮಂಗಲ ತಾಲ್ಲೂಕಿನ ಶಿವಗಂಗೆ ಪ್ರವಾಸಿ ಮಂದಿರದಲ್ಲಿ ನೇಣು ಬಿಗಿದುಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಲಾಖೆಯಲ್ಲಿ ಇಬ್ಬರು ಅಧಿಕಾರಿಗಳ ಸೇವಾ ದಾಖಲಾತಿ ಪುಸ್ತಕ ಕಳೆದು ಹೋಗಿದ್ದು, ಕಳೆದ ನಾಲ್ಕು ದಿನಗಳಿಂದ ಹುಡುಕಾಟ ನಡೆಸಿದರೂ ಸಿಕ್ಕಿಲ್ಲ. ಇದರಿಂದ ಮನನೊಂದಿದ್ದರು ಎನ್ನಲಾಗಿದೆ. ಗುರುವಾರ ರಾತ್ರಿ ಶಿವಗಂಗೆ ಪ್ರವಾಸಿ ಮಂದಿರಕ್ಕೆ ತೆರಳಿ ಕೊಠಡಿ ಪಡೆದುಕೊಂಡಿದ್ದಾರೆ. ಶುಕ್ರವಾರ ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ನೆಲಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.