ಅಪಘಾತ
–ಪ್ರಾತಿನಿಧಿಕ ಚಿತ್ರ
ಮಧುಗಿರಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗುರುವಾರ ಮೃತಪಟ್ಟಿರಿದ್ದಾರೆ.
ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕವಾಡಿಗರ ಪಾಳ್ಯದ ನಿವಾಸಿ ಹಾಗೂ ಚಿಕವಜ್ರ ಗ್ರಾ.ಪಂ ಉಪಾಧ್ಯಕ್ಷ ವೀರಭದ್ರಯ್ಯ (55) ಮೃತಪಟ್ಟವರು.
ಮಂಗಳವಾರ ಕವಾಡಿಗರ ಪಾಳ್ಯದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಹೊಡೆದಿತ್ತು. ಗಾಯಗೊಂಡಿದ್ದ ವೀರಭದ್ರಯ್ಯ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾರೆ.
ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.