
ಪ್ರಜಾವಾಣಿ ವಾರ್ತೆ
ಮಧುಗಿರಿ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಡಿಸೆಂಬರ್ 24 ರಂದು ಕನ್ನಡ ಭವನದಲ್ಲಿ ನಡೆಯುತ್ತಿರುವ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕವಿ, ವಿಮರ್ಶಕ ಕೆ.ಪಿ.ನಟರಾಜು ಅವರನ್ನು ಆಯ್ಕೆ ಮಾಡಲಾಗಿದೆ.
ತಾಂತ್ರಿಕ ಶಿಕ್ಷಣದ ಜೊತೆಗೆ ಕನ್ನಡದಲ್ಲಿ ಎಂ.ಎ. ಪದವಿ ಪಡೆದಿರುವ ನಟರಾಜು ಅವರು, ಕನ್ನಡ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಚಿಂತನೆ ಕುರಿತು ಆಳವಾದ ಅಧ್ಯಯನ ನಡೆಸಿ ಡಿ.ಲಿಟ್ ಪದವಿ ಪಡೆದಿದ್ದಾರೆ.
ಇವರ ಸಾಹಿತ್ಯ ಸಾಧನೆಗೆ ಅನೇಕ ಗೌರವಗಳು ಲಭಿಸಿದ್ದು, ‘ನಿತ್ಯವೂ ನಿನ್ನೊಡನೆ’ ಕವನ ಸಂಕಲನಕ್ಕೆ 2018ರ ಸಾಲಿನ ಕಡೆಂಗೋಡ್ಲು ಶಂಕರಭಟ್ ಕಾವ್ಯ ಪ್ರಶಸ್ತಿ ದೊರೆತಿದೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.