ADVERTISEMENT

ಮಧುಗಿರಿ | ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2025, 7:06 IST
Last Updated 2 ಡಿಸೆಂಬರ್ 2025, 7:06 IST
ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ನೀತಿಯನ್ನು ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮಧುಗಿರಿ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು
ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ನೀತಿಯನ್ನು ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮಧುಗಿರಿ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು   

ಮಧುಗಿರಿ: ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ನೀತಿಯನ್ನು ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘದ ತಾಲ್ಲೂಕು ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಪ್ಪ ಮಾತನಾಡಿ, ಮಧುಗಿರಿ ತಾಲ್ಲೂಕನ್ನು ಶಾಶ್ವತ ಬರಗಾಲ ಪೀಡಿತ ಪ್ರದೇಶ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಬೇಕು. ತಾಲ್ಲೂಕಿಗೆ ಹೇಮಾವತಿ ನೀರಿನ ಯೋಜನೆಯಡಿಯಲ್ಲಿ ಕನಿಷ್ಠ ಮೂರು ಟಿಎಂಸಿ ಅಡಿ ನೀರನ್ನು ಸರ್ಕಾರ ಹಂಚಿಕೆ ಮಾಡಬೇಕು. ಎತ್ತಿನಹೊಳೆ ಯೋಜನೆ ಎರಡು ಟಿಎಂಸಿ ನೀರು ಹಂಚಿಕೆಗೆ ಸರ್ಕಾರ ಮುಂದಾಗಬೇಕು ಹಾಗೂ ಎತ್ತಿನ ಹೊಳೆಯ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದರು.

ಡಾ.ಸ್ವಾಮಿನಾಥನ್ ವರದಿಯನ್ನು ಯಥಾವತ್ತಾಗಿ ಕೇಂದ್ರ ಸರ್ಕಾರ ಜಾರಿ ಮಾಡಲು ರಾಜ್ಯ ಸರ್ಕಾರ ಒತ್ತಡ ಹೇರಬೇಕು. ರೈತರ ವಿವಿಧ ಬೇಡಿಕೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಈಡೇರಿಸಲು ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದರು.

ADVERTISEMENT

ರೈತ ಸಂಘದ ಕಾರ್ಯದರ್ಶಿ ಸಂಘಟನಾ ದೊಡ್ಡಮಾಳಯ್ಯ, ತಾಲ್ಲೂಕು ಅಧ್ಯಕ್ಷ ರಾಜಶೇಖರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನಮ್ಮ, ಕಾರ್ಯದರ್ಶಿ ನಾಗರಾಜು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.