
ಪ್ರಜಾವಾಣಿ ವಾರ್ತೆಅಪಘಾತ
–ಪ್ರಾತಿನಿಧಿಕ ಚಿತ್ರ
ಕೊಡಿಗೇನಹಳ್ಳಿ (ಮಧುಗಿರಿ ತಾಲ್ಲೂಕು): ಹೋಬಳಿಯ ಹೊಸಹಳ್ಳಿ ಗೇಟ್ ಬಳಿ ಶುಕ್ರವಾರ ಮಧ್ಯಾಹ್ನ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೋಬಳಿಯ ಪೊಲೇನಹಳ್ಳಿ ಗ್ರಾಮದ ಲಕ್ಷ್ಮಿನರಸಪ್ಪ (53) ಮೃತರು. ಕೆಲಸದ ನಿಮಿತ್ತ ತೆರಿಯೂರು ಕಡೆಯಿಂದ ಕೊಡಿಗೇನಹಳ್ಳಿ ಕಡೆ ತೆರಳುತ್ತಿದ್ದಾಗ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.