
ಪ್ರಜಾವಾಣಿ ವಾರ್ತೆಅಪಘಾತ
–ಪ್ರಾತಿನಿಧಿಕ ಚಿತ್ರ
ಮಧುಗಿರಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿಕವಜ್ರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೀರಭದ್ರಯ್ಯ (55) ಗುರುವಾರ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕವಾಡಿಗರ ಪಾಳ್ಯದ ವೀರಭದ್ರಯ್ಯ ಮಂಗಳವಾರ ಕವಾಡಿಗರ ಪಾಳ್ಯದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವೀರಭದ್ರಯ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.