ಗುಬ್ಬಿ: ಮಹಾಲಯ ಅಮಾವಾಸ್ಯೆ ಅಂಗವಾಗಿ ತಾಲ್ಲೂಕಿನ ಮಣ್ಣಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು.
ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮ ನಡೆದವು. ದೇವಿಗೆ ಕುಂಕುಮ ಹಾಗೂ ಅರಿಶಿಣ ಅರ್ಚನೆ ನಂತರ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು.
ಮಹಾ ಮಂಗಳಾರತಿ ನಂತರ ದೇವಾಲಯಕ್ಕೆ ಬಂದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ತಾಲ್ಲೂಕಿನ ಅಪಾರ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.