ತುಮಕೂರು: ಶಿರಾ ತಾಲ್ಲೂಕಿನ ಗುಮ್ಮನಹಳ್ಳಿ ಬಳಿ ಗುರುವಾರ ಹಳ್ಳದ ಸೇತುವೆ ದಾಟುತ್ತಿದ್ದ ಸಮಯದಲ್ಲಿ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಗಂಗಣ್ಣ (60) ಎಂಬುವರು ಮೃತಪಟ್ಟಿದ್ದಾರೆ.
ಶಿರಾ ಕೆರೆಗೆ ನೀರು ಹರಿದು ಬರುವ ಹಳ್ಳದಲ್ಲಿ ಗುಮ್ಮನಹಳ್ಳಿ ಗ್ರಾಮದ ಗಂಗಣ್ಣ ಹಾಗೂ ಅವರ ಪತ್ನಿ ದಾಟುತ್ತಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ. ಮಹಿಳೆಯನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಗಂಗಣ್ಣ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.