ಸಾವು
(ಪ್ರಾತಿನಿಧಿಕ ಚಿತ್ರ)
ಕುಣಿಗಲ್: ಏ.10ರಂದು ಅಪಘಾತದಲ್ಲಿ ತೀವ್ರ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲ್ಲೂಕಿನ ಕೊತ್ತಗೆರೆಯ ಸಂತೋಷ್ ಕುಮಾರ್ (38) ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.
ಗುರುವಾರ ಪಟ್ಟಣದಿಂದ ಸ್ವಗ್ರಾಮಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪರಿಚಿತ ಕಾರು ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಮೃತರ ಸಂಬಂಧಿ ಮೋಹನ್ ಕುಮಾರ್ ನೀಡಿದ ದೂರಿನ ಮೇರೆಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.