ತುಮಕೂರು: ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಮುಬಾರಕ್ ಪಾಷಾ ಎಂಬುವರನ್ನು ಗುರುವಾರ ರಾತ್ರಿ ಕೊಲೆ ಮಾಡಲಾಗಿದೆ.
ನಗರದ ಜಿ.ಸಿ.ಆರ್ ಕಾಲೊನಿ ನಿವಾಸಿಯಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದರು. ತಡರಾತ್ರಿ ಮುಬಾರಕ್ ಪಾಷಾ ಮತ್ತು ಆರೋಪಿಗಳ ನಡುವೆ ಗಲಾಟೆ ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಹತ್ಯೆಯ ತನಿಖೆ ನಡೆಯುತ್ತಿದೆ. ಇಬ್ಬರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಕೆ.ಶಹಪೂರವಾಡ್ ' ಪ್ರಜಾವಾಣಿ' ಗೆ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.