ADVERTISEMENT

ಕುಣಿಗಲ್ | ಮಾರ್ಕೋನಹಳ್ಳಿ ಜಲಾಶಯ: ಬಾಲಕಿ ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 5:26 IST
Last Updated 8 ಅಕ್ಟೋಬರ್ 2025, 5:26 IST
<div class="paragraphs"><p>ಕುಣಿಗಲ್‌ ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಮೃತದೇಹಗಳ ಶೋಧಕಾರ್ಯ ನಡೆಯಿತು</p></div>

ಕುಣಿಗಲ್‌ ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಮೃತದೇಹಗಳ ಶೋಧಕಾರ್ಯ ನಡೆಯಿತು

   

ಕುಣಿಗಲ್: ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯದ ಹಿನ್ನೀರಿನ ಕಾಲುವೆಯಲ್ಲಿ ಕೊಚ್ಚಿಕೊಂಡು ಹೋದವರ ಪೈಕಿ ಬುಧವಾರ ಬೆಳಗ್ಗೆ ಬಾಲಕಿ ನಿಪ್ರಾ (4) ಮೃತದೇಹ ಪತ್ತೆಯಾಗಿದೆ.

ಮಂಗಳವಾರ ಮಧ್ಯಾಹ್ನ 6 ಜನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಸಾಧಿಯಾ ಮತ್ತು ಹರ್ಬಿನ್ ಮೃತದೇಹ ಮಂಗಳವಾರವೇ ಸಿಕ್ಕಿತ್ತು. ನೀರಿನಲ್ಲಿ ನಾಪತ್ತೆಯಾಗಿರುವ ತಬುಸಮ್, ಶಬಾನಾ ಮತ್ತು ಮೋಹಿಬ್‌ಗಾಗಿ ಹುಡುಕಾಟ ಮುಂದುವರಿದಿದೆ.

ADVERTISEMENT

ಅಗ್ನಿ ಶಾಮಕ‌ದಳದ ಸಿಬ್ಬಂದಿ, ಪೊಲೀಸರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.