
ಪ್ರಜಾವಾಣಿ ವಾರ್ತೆ
ತುಮಕೂರು: ಐಸಿಸ್ ಉಗ್ರ ಸಂಘಟನೆಯ ಜೊತೆ ನಂಟು ಹೊಂದಿರುವ ಶಂಕೆಯ ಮೇಲೆ ನಗರದ ಮರಳೂರು ದಿಣ್ಣೆಯ ಬಳಿ ವಾಸವಿದ್ದ ವೈದ್ಯಕೀಯ ವಿದ್ಯಾರ್ಥಿಯನ್ನು ಎನ್ಐಎಅಧಿಕಾರಿಗಳು ಭಾನುವಾರ ವಶಕ್ಕೆ ಪಡೆದಿದ್ದಾರೆ.
ನಗರದ ಎಚ್‌ಎಂಎಸ್ ಯುನಾನಿ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದರು. ಕಾಲೇಜಿನ ಮೇಲೆಯೂ ಎನ್ಐಎಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿದ್ಯಾರ್ಥಿ ಮಹಾರಾಷ್ಟ್ರ ಮೂಲದವರು ಎಂದು ತಿಳಿದು ಬಂದಿದೆ. ವಿದ್ಯಾರ್ಥಿಯನ್ನ ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಎನ್ಐಎ ಅಧಿಕಾರಿಗಳಿಂದ ತನಿಖೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.