ಮಧುಗಿರಿ: ತಾಲ್ಲೂಕು ಕಸಬಾ ವ್ಯಾಪ್ತಿಯ ಮರುವೇಕೆರೆ- ಬಂದ್ರೇನಹಳ್ಳಿ ಗ್ರಾಮದ ಸಮೀಪವಿರುವ ಮೀನಗೊಂದಿ ಮಲ್ಲೇ ರಂಗನಾಥ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ನೆರವೇರಿತು.
ರಾಜ್ಯದ ವಿವಿಧ ಭಾಗಗಳಿಗೆ ಸಾವಿರಾರು ಭಕ್ತಾದಿಗಳು ಆಗಮಿಸಿ ದರ್ಶನ ಪಡೆದರು. ದೇವಾಲಯದಿಂದ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ತಂದು ರಥದಲ್ಲಿ ಪ್ರತಿಷ್ಠಾಪನೆ ಮಾಡಿದ ನಂತರ ವಿವಿಧ ಪೂಜೆ ನೆರವೇರಿಸಿ ರಥವನ್ನು ಎಳೆಯಲಾಯಿತು.
ದೇವಾಲಯ ಸಮಿತಿ ಹಾಗೂ ದಾನಿಗಳಿಂದ ಸಿಹಿ ಊಟ, ಹೆಸರುಬೇಳೆ, ಮಜ್ಜಿಗೆ, ಪಾನಕ ವಿತರಣೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.