ADVERTISEMENT

ಕೇಂದ್ರದಿಂದ ಕಾರ್ಮಿಕರ ಮೇಲೆ ‘ಸರ್ಜಿಕಲ್‌ ಸ್ಟ್ರೈಕ್‌’: ಮೀನಾಕ್ಷಿ ಸುಂದರಂ ಟೀಕೆ

​ಪ್ರಜಾವಾಣಿ ವಾರ್ತೆ
Published 10 ಮೇ 2025, 15:27 IST
Last Updated 10 ಮೇ 2025, 15:27 IST
<div class="paragraphs"><p>ತುಮಕೂರಿನಲ್ಲಿ ಶನಿವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಆಯೋಜಿಸಿದ್ದ ಕಾರ್ಮಿಕರ ಜಿಲ್ಲಾ ಸಮಾವೇಶದಲ್ಲಿ&nbsp;ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿದರು.&nbsp;&nbsp;</p></div>

ತುಮಕೂರಿನಲ್ಲಿ ಶನಿವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಆಯೋಜಿಸಿದ್ದ ಕಾರ್ಮಿಕರ ಜಿಲ್ಲಾ ಸಮಾವೇಶದಲ್ಲಿ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿದರು.  

   

ತುಮಕೂರು: ಕೇಂದ್ರ ಸರ್ಕಾರ 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಕಾರ್ಮಿಕ ಸಂಹಿತೆ ಮಾಡಿ ಕಾರ್ಮಿಕರ ಮೇಲೆ ‘ಸರ್ಜಿಕಲ್‌ ಸ್ಟ್ರೈಕ್‌’ ನಡೆಸಲು ಮುಂದಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಟೀಕಿಸಿದರು.

ನಗರದಲ್ಲಿ ಶನಿವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಆಯೋಜಿಸಿದ್ದ ಕಾರ್ಮಿಕರ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದರು.

ADVERTISEMENT

ಕೇಂದ್ರವು ಕಾರ್ಮಿಕ ಸಂಹಿತೆ ಜಾರಿಗೆ ರಾಜ್ಯಗಳ ಮೇಲೆ ಒತ್ತಡ ಹೇರುತ್ತಿದೆ. ಇದು ಕಾರ್ಮಿಕ ಸಂಹಿತೆಯಲ್ಲ, ಮಾಲೀಕರ ಪರ ಸಂಹಿತೆ. ಇದರಿಂದ ಸಣ್ಣ ಕೈಗಾರಿಕೆಗಳಲ್ಲಿ ದುಡಿಯುವ ಶೇ 70 ರಷ್ಟು ಜನ ಸಂಕಷ್ಟಕ್ಕೆ ಸಿಲುಕುತ್ತಾರೆ. ಇದನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳಿಂದ ಮೇ 20ರಂದು ದೇಶದಾದ್ಯಂತ ಮುಷ್ಕರ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ಸರ್ಕಾರ ಕೆಲಸದ ಅವಧಿ ಹೆಚ್ಚಳ ಮಾಡಿದರೆ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ.  ಕೆಲಸದ ಅವಧಿ 6 ಗಂಟೆಗೆ ಇಳಿಸಿ, ದಿನಕ್ಕೆ ನಾಲ್ಕು ಪಾಳಿ ಮಾಡಿದರೆ ಇನ್ನಷ್ಟು ಜನರಿಗೆ ಉದ್ಯೋಗ ಸಿಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ‘ಬಂಡವಾಳ ಶಾಹಿ ಪರವಾಗಿ ಕಾಯ್ದೆಗಳನ್ನು ಬದಲಿಸಲಾಗುತ್ತಿದೆ. ಕಾರ್ಮಿಕರ ಶ್ರಮಕ್ಕೆ ಬೆಲೆ ಇಲ್ಲದಂತಾಗಿದೆ. ಸಂಹಿತೆ ಜಾರಿಯಾದರೆ ಕಾರ್ಮಿಕರು ಭೀಕರ ಸ್ಥಿತಿಗೆ ತಲುಪುತ್ತಾರೆ’ ಎಂದು ಆತಂಕ ವ್ಯಕ್ತಪಡಿಸಿದರು.

ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ಸೈಯದ್‍ ಮುಜೀಬ್‌, ಅಮ್ಜದ್‍, ಕಂಬೇಗೌಡ, ಗೋವಿಂದರಾಜು, ಮಂಜುಳಾ ಗೋನವಾರ, ಗಿರೀಶ್‍, ಎ.ಲೋಕೇಶ್‌ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.