ADVERTISEMENT

ಮಧುಗಿರಿ; ಕೆರೆ, ತಗ್ಗು ಪ್ರದೇಶಗಳಲ್ಲಿ ನೀರು

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 7:52 IST
Last Updated 1 ಆಗಸ್ಟ್ 2020, 7:52 IST
ಮಧುಗಿರಿಯಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಗೆ ಮಹಾತ್ಮಗಾಂಧಿ ಬಡವಾಣೆಯ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ
ಮಧುಗಿರಿಯಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಗೆ ಮಹಾತ್ಮಗಾಂಧಿ ಬಡವಾಣೆಯ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ   

ಮಧುಗಿರಿ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಯಿಂದಾಗಿ ಜಮೀನು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ಹರಿದಿದೆ.

ವರಮಹಾಲಕ್ಷ್ಮಿ ಹಬ್ಬದ ದಿನದಂದು ಸಂಜೆ ಸುರಿದ ಮಳೆಗೆ ಭೂಮಿ ಸಂಪೂರ್ಣ ತೇವಾಂಶವಾಗಿ ಕಾಲುವೆ, ಹಳ್ಳ ಹಾಗೂ ಕೆರೆಗಳಿಗೆ ನೀರು ಹರಿದಿದೆ.

ಪಟ್ಟಣದ ಮಹಾತ್ಮಗಾಂಧಿ ಬಡಾವಣೆ, ಕೆ.ಆರ್.ಬಡಾವಣೆ, ಪಿಎಲ್‌ಡಿ ಬ್ಯಾಂಕ್ ರಸ್ತೆ, ಕರಡಿಪುರ ಸೇರಿದಂತೆ ಹಲವು ಬಡಾವಣೆಯ ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಚರಂಡಿಗಳಲ್ಲಿ ನೀರು ತುಂಬಿ ರಸ್ತೆ ಮೇಲೆ ಹರಿದ್ದರಿಂದ ಪಾದಚಾರಿ ಹಾಗೂ ವಾಹನ ಸವಾರರಿಗೆ ಸಾಕಷ್ಟು ತೊಂದರೆಯಾಯಿತು.

ADVERTISEMENT

ಮಳೆ ಬಂದು ಹಲವು ದಿನಗಳು ಕಳೆದಿದ್ದವು. ಈ ಮಳೆಯಿಂದಾಗಿಶೇಂಗಾ, ಅವರೆ, ಅಲಸಂದೆ, ರಾಗಿ ಸೇರಿದಂತೆ
ಹಲವು ಬೆಳೆಗಳಿಗೆ ಜೀವ ಕಳೆ ಬಂದಂತಾಗಿದೆ.

ಹುಳಿಯಾರು:
ಹದ ಮಳೆ

ಹುಳಿಯಾರು: ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯ ಕೆಲ ಗ್ರಾಮಗಳಲ್ಲಿ ಶುಕ್ರವಾರ ಸಂಜೆ ಹದ ಮಳೆಯಾಗಿದೆ.

ಬೆಳಿಗ್ಗೆಯಿಂದ ಬಿಸಿಲ ಝಳ ಹೆಚ್ಚಾಗಿದ್ದು, ಸಂಜೆ ವೇಳೆ ಮಳೆ ಬಂದು ತಂಪೆರೆಯಿತು. ಯಳನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಮ್ಮಡಿಹಳ್ಳಿ ಸುತ್ತ ಮುತ್ತ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಬಂತು.

ಇದರಿಂದ ತಗ್ಗು ಪ್ರದೇಶಗಳಿಗೆ ನೀರು ಹರಿಯಿತು. ಕೆಲ ಕಡೆ ತೆಂಗಿನ ತೋಟಗಳಲ್ಲಿ ನೀರು ಶೇಖರಣೆಯಾಗಿತ್ತು. ಉಳಿದಂತೆ ದಸೂಡಿ, ಗಾಣಧಾಳು, ಕೆಂಕೆರೆ, ಹುಳಿಯಾರು ಪಟ್ಟಣದ ಸುತ್ತಮುತ್ತ ಹದ ಮಳೆಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.