ತುಮಕೂರು: ಬೆಂಗಳೂರು– ತುಮಕೂರು ನಡುವಿವ ಮೆಟ್ರೊ ಯೋಜನೆಯನ್ನು ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಇಲ್ಲಿ ಶುಕ್ರವಾರ ತಿಳಿಸಿದರು.
‘ಸಂಪರ್ಕ ವ್ಯವಸ್ಥೆ ಸುಧಾರಿಸಿದರೆ ಬೆಂಗಳೂರು ಮೇಲಿನ ಒತ್ತಡ ಕಡಿಮೆ ಮಾಡಬಹುದು. ಇದಕ್ಕಾಗಿ ತುಮಕೂರಿಗೆ ಮೆಟ್ರೊ ವಿಸ್ತರಣೆಗೆ ಉದ್ದೇಶಿಸಿದ್ದು, ಈಗಾಗಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗುತ್ತಿದೆ’ ಎಂದರು.
ಮೆಟ್ರೋ ರೈಲು ಮಾರ್ಗದ ಕಾಮಗಾರಿಗೆ ಸರ್ಕಾರ ಹಣ ಕೊಡಬೇಕಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಒಪ್ಪಿಗೆ ಕೊಟ್ಟರೆ ಸಾಕು. ಈ ಯೋಜನೆಯಲ್ಲಿ ಹಣ ಹೂಡಿಕೆ ಮಾಡಲು ಸಾಕಷ್ಟು ಕಂಪನಿಗಳು ಮುಂದೆ ಬಂದಿವೆ. ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಕಾರ್ಯಗತ ಮಾಡಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.