ADVERTISEMENT

ಶಿರಾ | ಫೈನಾನ್ಸ್‌ ಸಿಬ್ಬಂದಿ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 18:15 IST
Last Updated 1 ಆಗಸ್ಟ್ 2025, 18:15 IST
<div class="paragraphs"><p> ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಶಿರಾ: ತಾಲ್ಲೂಕಿನ ಬಡಕನಹಳ್ಳಿಯಲ್ಲಿ ಮೈಕ್ರೊಫೈನಾನ್ಸ್‌ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಜಗನ್ನಾಥ್‌ (40) ಎಂಬುವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿರಾದ ಬಾರ್‌ ಒಂದರಲ್ಲಿ ಹೋಟೆಲ್‌ ಮಾಡಿಕೊಂಡಿದ್ದರು. ಪತ್ನಿ ಗಿರಿಜಾ ಹೆಸರಿನಲ್ಲಿ ₹5 ಲಕ್ಷ ಸಾಲ ಪಡೆದಿದ್ದರು. ಕನಕ ಬ್ಯಾಂಕ್‌, ಬಜಾಜ್‌ ಫೈನಾನ್ಸ್‌, ಸಮರ್ಥ ಫೈನಾನ್ಸ್‌ ಸೇರಿ ಮೂರು ಮೈಕ್ರೊಫೈನಾನ್ಸ್‌ನಲ್ಲಿ ಸಾಲ ಪಡೆದಿದ್ದರು‌. ಸಾಲ ಮರು ಪಾವತಿ ಮಾಡುವಂತೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ADVERTISEMENT

ಜುಲೈ 28ರಂದು ಬೆಳಿಗ್ಗೆ ಜಮೀನಿನಲ್ಲಿ ಜಗನ್ನಾಥ್ ವಿಷ ಸೇವಿಸಿದ್ದರು. ಅವರ ತಮ್ಮ ನರಸೇಗೌಡ ಹೊಲಕ್ಕೆ ಹೋದಾಗ ಜಗನ್ನಾಥ್‌ ಅಸ್ವಸ್ಥರಾಗಿದ್ದರು. ಕೂಡಲೇ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.