ADVERTISEMENT

ಬಾಗೇಪಲ್ಲಿಯಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 4:32 IST
Last Updated 14 ಆಗಸ್ಟ್ 2020, 4:32 IST
ಬಾಗೇಪಲ್ಲಿ ತಾಲ್ಲೂಕು ಪಂಚಾಯಿತಿ ಮುಂದೆ ಸಿಐಟಿಯು ಹಾಗೂ ಬಿಸಿಊಟ ನೌಕರರ ಸಂಘದ ಪದಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು
ಬಾಗೇಪಲ್ಲಿ ತಾಲ್ಲೂಕು ಪಂಚಾಯಿತಿ ಮುಂದೆ ಸಿಐಟಿಯು ಹಾಗೂ ಬಿಸಿಊಟ ನೌಕರರ ಸಂಘದ ಪದಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು   

ಬಾಗೇಪಲ್ಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಸಿಐಟಿಯು ನೇತೃತ್ವದಲ್ಲಿ ಬುಧವಾರ ಅಕ್ಷರ ದಾಸೋಹ ನೌಕರರ ಸಂಘದ ತಾಲ್ಲೂಕು ಸಮಿತಿ ಸದಸ್ಯರು ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟಿಸಿದರು.

ಸಿಐಟಿಯು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆಂಜನೇಯರೆಡ್ಡಿ ಮಾತನಾಡಿ, ಬಡ ಮಹಿಳೆಯರಿಗೆ, ವಿಚ್ಛೇದಿತ ಮಹಿಳೆಯರು, ವಿಧವೆಯರು ಬಿಸಿಯೂಟದ ಉದ್ಯೋಗವನ್ನೇ ನಂಬಿದ್ದಾರೆ. 4 ತಿಂಗಳಿಂದ ಆದಾಯ ಇಲ್ಲದೇ ಸಂಕಷ್ಟದಲ್ಲಿ ಇದ್ದಾರೆ. ಶಾಲೆಗಳನ್ನು ಮುಚ್ಚಿರುವುದರಿಂದ ಬಿಸಿಯೂಟ ನೌಕರರೇ ವಿದ್ಯಾರ್ಥಿಗಳ ಮನೆಗಳಿಗೆ ಆಹಾರ ಸಾಮಾಗ್ರಿಗಳನ್ನು ತಲುಪಿಸುತ್ತಿದ್ದಾರೆ. ನೌಕರರಿಗೆ ಏಪ್ರಿಲ್ ತಿಂಗಳಿನಿಂದ ಸಂಬಳ ನೀಡಿಲ್ಲ. ಆರ್ಥಿಕ ಪ್ಯಾಕೇಜ್ ಸಹ ಸರ್ಕಾರ ಘೊಷಣೆ ಮಾಡಿಲ್ಲ. ಇದರಿಂದ ನೌಕರರು ಜೀವನ ಸಾಗಿಸಲು ಕಷ್ಟ ಆಗಿದೆ ಎಂದು ತಿಳಿಸಿದರು.

ಅಕ್ಷರ ದಾಸೋಹ ನೌಕರರ ಸಂಘದ ತಾಲ್ಲೂಕು ಸಮಿತಿ ಅಧ್ಯಕ್ಷ ಜಿ.ಮುಸ್ತಾಫ ಮಾತನಾಡಿದರು. ಪ್ರತಿಭಟನಾ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಎನ್.ಮಂಜುನಾಥಸ್ವಾಮಿ ಭೇಟಿ ನೀಡಿ ಮನವಿ ಪಡೆದರು.

ADVERTISEMENT

ಅಕ್ಷರ ದಾಸೋಹ ನೌಕರರ ಸಂಘದ ತಾಲ್ಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಅಮರಾವತಿ, ಖಜಾಂಚಿ ರಾಮಾಂಜಿನಮ್ಮ, ರಾಜಮ್ಮ, ಶಾಂತಮ್ಮ, ಅನಿತಾ, ಎ.ರಾಧಮ್ಮ, ಅಲುವೇಲಮ್ಮ, ಸರಿತಾ, ಆದಿಲಕ್ಷ್ಮಮ್ಮ, ಕೆ.ಮಂಗಮ್ಮ, ನಾಗಮಣಿಯಮ್ಮ, ಮುಬೀನಾ, ಎನ್.ರತ್ನಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.