ADVERTISEMENT

ವಿವಿಧ ಬೇಡಿಕೆ: ಬಿಸಿಯೂಟ ನೌಕರರ ಮನವಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 10:05 IST
Last Updated 4 ಜೂನ್ 2020, 10:05 IST
ತುರುವೇಕೆರೆ ತಾಲ್ಲೂಕಿನ ಬಿಸಿಯೂಟ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಆರ್.ನಯಿಂಉನ್ನೀಸಾ ಅವರಿಗೆ ಬುಧವಾರ ಮನವಿ ಸಲ್ಲಿಸಿದರು
ತುರುವೇಕೆರೆ ತಾಲ್ಲೂಕಿನ ಬಿಸಿಯೂಟ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಆರ್.ನಯಿಂಉನ್ನೀಸಾ ಅವರಿಗೆ ಬುಧವಾರ ಮನವಿ ಸಲ್ಲಿಸಿದರು   

ತುರುವೇಕೆರೆ: ತಾಲ್ಲೂಕಿನ ಬಿಸಿಯೂಟ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಆರ್.ನಯಿಂ ಉನ್ನೀಸಾ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ತಾಲ್ಲೂಕಿನ ಬಿಸಿಯೂಟ ನೌಕರರು ಕೆಲಸದ ಭದ್ರತೆ ಇಲ್ಲದೆ ಅತಿ ಕಡಿಮೆ ಸಂಬಳಕ್ಕಾಗಿ ದುಡಿಯುತ್ತಿದ್ದಾರೆ. ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸಲು, ಕ್ವಾರಂಟೈನ್ ಕೇಂದ್ರಗಳಲ್ಲಿ ಯಾವುದೇ ಸುರಕ್ಷಿತ ಕ್ರಮಗಳಿಲ್ಲದೆ ಕೆಲಸ ನಿರ್ವಹಿಸಿದ್ದಾರೆ. ಬಿಸಿಯೂಟ ಸಿಬ್ಬಂದಿಯನ್ನು ಕಾಯಂಗೊಳಿಸಬೇಕು. ಕೊರೊನಾ ವೇಳೆ ಮಾಡಿದ ಕೆಲಸಕ್ಕೆ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಲಾಕ್‌ಡೌನ್ ವೇಳೆ ಮುಖ್ಯಮಂತ್ರಿ ಅಸಂಘಟಿತ ಕಾರ್ಮಿಕರಿಗೆ ಘೋಷಣೆ ಮಾಡಿರುವ ಆರ್ಥಿಕ ಪರಿಹಾರವನ್ನು ಬಿಸಿಯೂಟದ ಸಿಬ್ಬಂದಿಗೂ ನೀಡಬೇಕು. ಎಲ್ಲ ಸಿಬ್ಬಂದಿಗೂ ಕೊರೊನಾ ಪರೀಕ್ಷೆ ಮಾಡಬೇಕು ಹಾಗೂ ಬಿಸಿಯೂಟ ಯೋಜನೆಯನ್ನು ಖಾಸಗೀಕರಣ ಮಾಡದಂತೆ ಈಗಿರುವಂತೆಯೇ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಸಂಘದ ತಾಲ್ಲೂಕು ಅಧ್ಯಕ್ಷೆ ಶಾಂತಮ್ಮ, ಕಾರ್ಯದರ್ಶಿ ಸುಮಾ, ಸದಸ್ಯರಾದ ಪಾರ್ವತಮ್ಮ, ಸಿಐಟಿಯು ಉಪಾಧ್ಯಕ್ಷೆ ಮಂಜುಳಾ, ಕಾರ್ಯದರ್ಶಿ ಸತೀಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.