ADVERTISEMENT

ರಾಗಿ ಖರೀದಿ ಕೇಂದ್ರ: ಹತ್ತು ಸಾವಿರಕ್ಕೂ ಹೆಚ್ಚು ರೈತರ ನೋಂದಣಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2024, 5:45 IST
Last Updated 20 ಮಾರ್ಚ್ 2024, 5:45 IST
ಕುಣಿಗಲ್ ರಾಗಿ ಖರೀದಿ ಕೇಂದ್ರದಲ್ಲಿ ಖರೀದಿ ಮಾಡಿದ ರಾಗಿಯನ್ನು ಚೀಲಗಳಲ್ಲಿ ತುಂಬುತ್ತಿರುವ ಕಾರ್ಮಿಕರು
ಕುಣಿಗಲ್ ರಾಗಿ ಖರೀದಿ ಕೇಂದ್ರದಲ್ಲಿ ಖರೀದಿ ಮಾಡಿದ ರಾಗಿಯನ್ನು ಚೀಲಗಳಲ್ಲಿ ತುಂಬುತ್ತಿರುವ ಕಾರ್ಮಿಕರು   

ಕುಣಿಗಲ್: ಪಟ್ಟಣದ ಎಪಿಎಂಸಿ ಆವರಣದಲ್ಲಿ ಪ್ರಾರಂಭಿಸಲಾಗಿರುವ ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಖರೀದಿ ಮತ್ತು ನೋಂದಣಿ ಏಕಕಾಲದಲ್ಲಿ ನಡೆಯುತ್ತಿದ್ದು, ಮಂಗಳವಾರದವರೆಗೆ ಹತ್ತು ಸಾವಿರ ರೈತರು ನೋಂದಣಿ ಮಾಡಿಕೊಂಡಿದ್ದಾರೆ.

ಮಾರ್ಚ್‌ 15ರಿಂದ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಮಂಗಳವಾರಕ್ಕೆ ನಾಲ್ಕು ಸಾವಿರ ಕ್ವಿಂಟಲ್ ರಾಗಿಯನ್ನು ರೈತರು ಮಾರಾಟ ಮಾಡಿದ್ದಾರೆ. ಜಿಲ್ಲೆಗೆ ಹತ್ತು ಸಾವಿರ ಮೆಟ್ರಿಕ್ ಟನ್ ರಾಗಿ ಖರೀದಿ ಗುರಿ ಇದ್ದು, ಅಲ್ಲಿಯವರೆಗೂ ನೋಂದಣಿ ಪ್ರಕ್ರಿಯೆ ನಡೆಯುತ್ತದೆ ಎಂದು ವ್ಯವಸ್ಥಾಪಕ ಕೃಷ್ಣಪ್ಪ ತಿಳಿಸಿದ್ದಾರೆ.

ನಾಲ್ಕು ವರ್ಷಗಳಿಂದಲೂ ರಾಗಿ ಖರೀದಿಯಲ್ಲಿ ಒಂದಿಲ್ಲೊಂದು ಗೊಂದಲ ಸೃಷ್ಟಿಯಾಗುತ್ತಿತ್ತು. ಪ್ರಸಕ್ತ ಸಾಲಿನಲ್ಲಿ ವ್ಯವಸ್ಥಿತ ನೋಂದಣಿ ಮತ್ತು ರಾಗಿ ತಂದು ಹಾಕುವ ಬಗ್ಗೆ ಸ್ಪಷ್ಟ ಮಾಹಿತಿ ಮತ್ತು ಟೋಕನ್‌ ವಿತರಿಸಿರುವ ಕಾರಣ ಯಾವುದೇ ಗೊಂದಲವಿಲ್ಲದೆ ರೈತರು ಮಾರಾಟ ಮಾಡುತ್ತಿದ್ದಾರೆ.

ADVERTISEMENT

‘ರಾಗಿ ಖರೀದಿ ಕೇಂದ್ರಕ್ಕೆ ರಾಗಿ ತಂದು ಕೇಂದ್ರದಲ್ಲಿ ಖರೀದಿಯಾಗುವವರೆಗೆ ಕಾಯಬೇಕಿದ್ದು, ಮೂಲ ಸೌಕರ್ಯಗಳ ಕೊರತೆ ಇದೆ. ಅಧಿಕಾರಿಗಳು ಅದನ್ನು ನೀಗಿಸಬೇಕು’ ಎಂದು ರೈತರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.