ADVERTISEMENT

ಕೆರೆಗೋಡಿ ಮಠಕ್ಕೆ ಸಚಿವರ ಭೇಟಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2021, 4:18 IST
Last Updated 6 ಆಗಸ್ಟ್ 2021, 4:18 IST
ತಿಪಟೂರು ತಾಲ್ಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಬಿ.ಸಿ.ನಾಗೇಶ್ ಸ್ವಾಮೀಜಿ ಆಶೀರ್ವಾದ ಪಡೆದರು
ತಿಪಟೂರು ತಾಲ್ಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಬಿ.ಸಿ.ನಾಗೇಶ್ ಸ್ವಾಮೀಜಿ ಆಶೀರ್ವಾದ ಪಡೆದರು   

ತಿಪಟೂರು: ‘ಕೋವಿಡ್‌ ಸಂಕಷ್ಟದ ಕಾಲದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದು, ನಾಡಿಗೆ ಒಳಿತಾಗುವಂತೆ ಉತ್ತಮ ಕಾರ್ಯನಿರ್ವಹಣೆ ಮಾಡಿ’ ಎಂದು ಸಚಿವ ಬಿ.ಸಿ.ನಾಗೇಶ್‍ ಅವರಿಗೆ ಕೆರೆಗೋಡಿ-ರಂಗಾಪುರ ಕ್ಷೇತ್ರದ ಅಧ್ಯಕ್ಷ ಗುರುಪರದೇಶೀಕೇಂದ್ರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಬಿ.ಸಿ.ನಾಗೇಶ್ ಸ್ವಾಮೀಜಿ ಆಶೀರ್ವಾದ ಪಡೆದರು.

ತಾಲ್ಲೂಕಿಗೆ ಸಚಿವ ಸ್ಥಾನ ದೊರೆತಿರುವುದು ಸಂತೋಷ ತಂದಿದ್ದು, ಬೊಮ್ಮಾಯಿ ಸರ್ಕಾರ ನಾಡಿನ ಜನತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡುವಂತಾಗಲಿ ಎಂದರು.

ADVERTISEMENT

ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ಕೆಳ ಹಂತದಿಂದಲೂ ಸಮಸ್ಯೆಗಳ ಅರಿವಿದ್ದು, ಸಿಕ್ಕಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಅನುಕೂಲವಾಗುವಂತೆ ಕಾರ್ಯನಿರ್ವಹಿಸುವ ಭರವಸೆ ನೀಡಿದರು.

ನಗರಸಭೆ ಅಧ್ಯಕ್ಷ ಪಿ.ಜೆ.ರಾಮಮೋಹನ್, ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಸುರೇಶ್, ಕುಮಾರ ಆಸ್ಪತ್ರೆಯ ವೈದ್ಯ ಡಾ.ಶ್ರೀಧರ್, ಕೆರೆಗೋಡಿ ದೇವರಾಜು, ಹರಿಸಮುದ್ರ ಗಂಗಾಧರ್, ಶ್ರೀಕಂಠ, ವಿಶ್ವದೀಪ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.