ADVERTISEMENT

ತುಮಕೂರು: ಬರ ನಿರ್ವಹಣೆಗೆ ಸಚಿವರ ಸಭೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2023, 5:32 IST
Last Updated 8 ನವೆಂಬರ್ 2023, 5:32 IST
<div class="paragraphs"><p>ಬರ (ಪ್ರಾತಿನಿಧಿಕ ಚಿತ್ರ)</p></div>

ಬರ (ಪ್ರಾತಿನಿಧಿಕ ಚಿತ್ರ)

   

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರು ತಾಲ್ಲೂಕು ಮಟ್ಟದಲ್ಲಿ ಬರ ಪರಿಸ್ಥಿತಿಯ ಅವಲೋಕನ ನಡೆಸಿ, ಬರ ನಿರ್ವಹಣೆಗೆ ಅಧಿಕಾರಿಗಳು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.

ಜಿಲ್ಲೆಯ ತಾಲ್ಲೂಕುಗಳ ಬರ ಪರಿಸ್ಥಿತಿ ಹಾಗೂ ಕಂದಾಯ ವಿಷಯಗಳ ಕುರಿತಂತೆ ನ. 8ರಂದು ಸಭೆ ನಡೆಸಲಿದ್ದಾರೆ. ಶಿರಾದಲ್ಲಿ ಬೆಳಿಗ್ಗೆ 10 ಗಂಟೆಗೆ, ಪಾವಗಡದಲ್ಲಿ ಮಧ್ಯಾಹ್ನ 2.30ಕ್ಕೆ, ಮಧುಗಿರಿಯಲ್ಲಿ ಸಂಜೆ 4.30ಕ್ಕೆ, ಕೊರಟಗೆರೆಯಲ್ಲಿ ಸಂಜೆ 6 ಗಂಟೆಗೆ ಸಭೆ ನಡೆಯಲಿದೆ.

ADVERTISEMENT

ನ್ಯಾಯಾಲಯ ಪ್ರಕರಣಗಳ ಪ್ರಗತಿ ಪರಿಶೀಲನೆ, ಪಹಣಿ ಕಲಂ 3 ಮತ್ತು 9ರ ವ್ಯತ್ಯಾಸದ ಪ್ರಕರಣಗಳ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.

ಕೆಡಿಪಿ ಸಭೆ: ನ. 10ರಂದು ಸಚಿವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಲಿದೆ. ಸೆಪ್ಟೆಂಬರ್ ತಿಂಗಳ ಅಂತ್ಯಕ್ಕೆ (ಮೊದಲ ಆರು ತಿಂಗಳ) ಪ್ರಗತಿ ಪರಿಶೀಲನೆ ನಡೆಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.